‘ಬಸವ ಮಂಟಪ’ ಡಿಜಿಟಲ್ ಮಾದರಿ ಮುಟ್ಟುಗೋಲಿಗೆ ಆದೇಶ

ಬೆಂಗಳೂರು, ನ.24: ಹನ್ನೆರಡನೇ ಶತಮಾನದ ಸಮಾಜ ಸುಧಾರಕ, ವಚನಕಾರ ಬಸವಣ್ಣನವರ ಕುರಿತು ವಿವಾದಾತ್ಮಕ ಅಂಶಗಳನ್ನು ಒಳಗೊಂಡಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಅನಿವಾಸಿ ಭಾರತೀಯ ಲೇಖಕ ರವಿ ಹಂಜ್ ಅವರ ‘ಬಸವ ಮಂಟಪ’ ಕೃತಿಗೆ ಕರ್ನಾಟಕ ಸರ್ಕಾರ ತಡೆ ಹಾಕಿದೆ.

ಪುಸ್ತಕದ ಮುದ್ರಿತ ಹಾಗೂ ಡಿಜಿಟಲ್ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರ ವಿತರಣೆಗೂ ನಿಷೇಧ ಹೇರಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎನ್‌ಎಸ್‌) ಸೆಕ್ಷನ್ 98(1)ರ ಅಡಿಯಲ್ಲಿ ನವೆಂಬರ್ 22ರಂದು ಸರ್ಕಾರ ಈ ಆದೇಶ ಹೊರಡಿಸಿದೆ. ಸಾರ್ವಜನಿಕ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದನ್ನು ಗೃಹ ಇಲಾಖೆ ಪ್ರಮುಖ ಕಾರಣವಾಗಿ ಉಲ್ಲೇಖಿಸಿದೆ.

ದೇಶದ ಯಾವುದೇ ಭಾಗದಲ್ಲಿ ಈ ಪುಸ್ತಕದ ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳು ಪತ್ತೆಯಾದರೂ ಅವುಗಳನ್ನು ವಶಪಡಿಸಿಕೊಂಡು ಮುಟ್ಟುಗೋಲು ಹಾಕಿಕೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ನವೆಂಬರ್ 19ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದ ಬೆನ್ನಲ್ಲೇ ಈ ಕ್ರಮ ಜರುಗಿದೆ. ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಬಸವಣ್ಣನವರ ಬಗ್ಗೆ ಅವಹೇಳನದ ಆರೋಪ

ಕಳೆದ ಎರಡು ವರ್ಷಗಳಿಂದ ‘ವಿಶ್ವವಾಣಿ’ ಪತ್ರಿಕೆಯಲ್ಲಿ ರವಿ ಹಂಜ್ ಬರೆದಿದ್ದ ಅಂಕಣಗಳ ಸಂಗ್ರಹವೇ ‘ಬಸವ ಮಂಟಪ’ ಕೃತಿಯಾಗಿದೆ. ನವೆಂಬರ್ 15ರಂದು ಬೆಂಗಳೂರಿನ ಕೆ.ಜಿ. ರಸ್ತೆಯ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಮಾಡಲಾಗಿತ್ತು.

ಈ ಕೃತಿಯಲ್ಲಿ ಬಸವಣ್ಣನವರನ್ನು ಕಳ್ಳ ಮತ್ತು ಕೊಲೆಗಾರ ಎಂದು ಚಿತ್ರಿಸಲಾಗಿದೆ. ಕಲ್ಯಾಣ ಮತ್ತು ಕಲ್ಯಾಣ ಕ್ರಾಂತಿಗೆ ಸಂಬಂಧಿಸಿದ ಐತಿಹಾಸಿಕ ಘಟನೆಗಳನ್ನು ತಿರುಚಲಾಗಿದೆ. ವಿಶ್ವಗುರು ಬಸವಣ್ಣ, ಶರಣ ಪರಂಪರೆ ಹಾಗೂ ಲಿಂಗಾಯತ ಅಸ್ಮಿತೆಯನ್ನು ಅವಮಾನಿಸುವ ಪ್ರಯತ್ನ ನಡೆದಿದೆ ಎಂಬುದು ದೂರುದಾರರ ಆರೋಪವಾಗಿದೆ. ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಈ ಕೃತಿಗೆ ವೇದಿಕೆ ಕಲ್ಪಿಸಿರುವ ಬಗ್ಗೆಯೂ ದೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಹೈಕೋರ್ಟ್ ಮೆಟ್ಟಿಲೇರಿದ ಲೇಖಕ

ವಿವಾದದ ಹಿನ್ನೆಲೆಯಲ್ಲಿ ಪೊಲೀಸ್ ಕ್ರಮ ಹಾಗೂ ಬಂಧನದ ಬೆಳವಣಿಗೆಗಳ ನಂತರ ರವಿ ಹಂಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಹಾಗೂ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ದೂರಿನ ಹಿಂದೆ ವೈಯಕ್ತಿಕ ದ್ವೇಷವಿದೆ ಎಂಬುದು ಅವರ ಮತ್ತೊಂದು ಆರೋಪವಾಗಿದೆ.

More articles

Latest article

Most read