ಕರ್ನಾಟಕ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎಂ.ಎಸ್. ರಾಮಚಂದ್ರ ರಾವ್ ಶಿಫಾರಸು

ಬೆಂಗಳೂರು, ನ.25 : ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಹಾಗೂ ತ್ರಿಪುರ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2025ರ ಜುಲೈ 19ರಿಂದ ವಿಭು ಬಖ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನೂತನ ಸಿಜೆ ಹಿನ್ನೆಲೆ: 1966ರ ಆಗಸ್ಟ್ 7ರಂದು ಹೈದರಾಬಾದ್‌ನಲ್ಲಿ ಜನಿಸಿದ ಎಂ.ಎಸ್. ರಾಮಚಂದ್ರ ರಾವ್ ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಲಾದಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಎಲ್‌ಎಲ್‌ಬಿ ಅಂತಿಮ ವರ್ಷದಲ್ಲಿ ಅತ್ಯಧಿಕ ಅಂಕ ಗಳಿಸಿ ಚಿನ್ನದ ಪದಕ ಪಡೆದಿದ್ದರು.

1989ರ ಸೆಪ್ಟೆಂಬರ್ 7ರಂದು ವಕೀಲ ವೃತ್ತಿ ಆರಂಭಿಸಿದ ಅವರು, 2012ರ ಜೂನ್ 29ರಂದು ಆಂಧ್ರಪ್ರದೇಶ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಬಳಿಕ 2013ರ ಡಿಸೆಂಬರ್ 4ರಂದು ಕಾಯಂ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದಿದ್ದರು.

More articles

Latest article

Most read