ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ ಸ್ಪೋಟ; ಡಿಐಜಿ ಅಲೋಕ್ ಮೋಹನ್​ ಹೇಳಿದ್ದೇನು ಗೊತ್ತಾ?

Most read

ಬೆಂಗಳೂರಿನ ಪ್ರಸಿದ್ಧ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟ ಸಂಭವಿಸಿ 9 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟಕ ಬಗ್ಗೆ ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್ (DIG Alok Mohan) ಪ್ರತಿಕ್ರಿಯೆ ನೀಡಿದ್ದು, ಸ್ಪೋಟಕ್ಕೆ ಕಾರಣವೇನು ಎಂಬುದರ ಬಗ್ಗೆ ಸದ್ಯಕ್ಕೆ ತಿಳಿದಿಲ್ಲ, ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ವಿದಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ತಿಳಿಯಲಿದೆ ಎಂದರು.

ರಾಮೇಶ್ವರಂ ಕೆಫೆಯಲ್ಲಿ ಸುಮಾರು ಒಂದು ಗಂಟೆಗೆ ಸ್ಪೋಟ ನಡೆದಿದೆ. ಘಟನಾ ಸ್ಥಳಕ್ಕೆ ಎಫ್​ಎಸ್​​ಎಲ್ ತಾಂತ್ರಿಕ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದೆ. ಬಾಂಬ್ ಸ್ಫೋಟದಲ್ಲಿ ಒಟ್ಟು 9 ಜನರಿಗೆ ಗಾಯಗೊಂಡಿದ್ದಾರೆ, ಯಾರಿಗೂ ಸೀರಿಯಸ್ ಆಗಿಲ್ಲ, ನಾವು ತನಿಖೆ ಮಾಡುತ್ತಿದ್ದೇವೆ. ಎಫ್​ಎಸ್​ಎಲ್ ತಂಡ ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದೆ. ಈ ಘಟನೆಗೆ ಕಾರಣನಾದ ಆರೋಪಿಯನ್ನ ನಾವು ಖಂಡಿತ ಪತ್ತೆ ಮಾಡುತ್ತೇವೆ ಎಂದರು.

ಯಾರ ಮೇಲಾದರೂ ಅನುಮಾನ ಇದಿಯೇ ಎಂದು ಕೇಳಿದ್ದಕ್ಕೆ, ಸದ್ಯಕ್ಕೆ ಯಾರ ಮೇಲೂ ಅನುಮಾನ ಇಲ್ಲ, ತನಿಖೆ ನಡೆಯುತ್ತಿದೆ. ತಾಂತ್ರಿಕ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದರು. ನಾವು ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ, ಕೇಂದ್ರ ಗುಪ್ತಚರ ಅಧಿಕಾರಿಗಳು ಮಾಹಿತಿ ಹೋಗಿದೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮಾಹಿತಿ ಪಡೆದಿದ್ದಾರೆ. ಎಫ್ಎಸ್​ಎಲ್ ತಂಡ ಸಂಪೂರ್ಣ ಪರಿಶೀಲನೆ ಬಳಿಕ ಮಾಹಿತಿ ನೀಡುತ್ತೇವೆ. ತನಿಖೆ ಬಳಿಕ ಆರೋಪಿ ಏನು ತಂದಿದ್ದಾನೆ ಎನ್ನುವುದು ಗೊತ್ತಾಗಲಿದೆ ಎಂದು ಅಲೋಕ್ ಮೋಹನ್ ಹೇಳಿದ್ದಾರೆ.

More articles

Latest article