2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಮಂಡ್ಯ ಬಿಜೆಪಿ ಮುಖಂಡ ಬಂಧನ

Most read

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮೂವರ ಬಂಧನವಾದ ಬೆನ್ನಲ್ಲೇ ಈಗ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದ್ದ ಬಿಜೆಪಿ ಮುಖಂಡನ ಕೇಸ್ ಕೂಡ ಒಪನ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2022ರಲ್ಲಿ ಮಂಡ್ಯದಲ್ಲಿ (Mandya) ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವಿಚಾರವನ್ನೇ ಮುಂದಿಟ್ಟುಕೊಂಡು ಈಗ ಕಾಂಗ್ರೆಸ್‌ ಪ್ರಕರಣ ದಾಖಲಿಸಿದೆ.

ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಈ ವೇಳೆ “ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್” ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಮುರ್ದಾಬಾದ್‌ ಎಂದು ಹೇಳುವ ಬದಲು ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.

ಕನ್ನಂಬಾಡಿ ಕುಮಾರ್‌ ದೂರು ನೀಡಿದ್ದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಮೇರೆಗೆ ಆರಾಧ್ಯ, ರವಿ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ

More articles

Latest article