ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್ ಐಎ ಇದೀಗ ಬಾಂಬ್ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.
ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಇದೀಗ ಬಾಂಬರ್ ನ ಫೋಟೋ ಸ್ಕೆಚ್ ಬಿಡುಗಡೆ ಮಾಡಿದೆ.
ಈ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆಯಷ್ಟೇ ಬಾಂಬರ್ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್ ನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ.