ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಅಲ್ಲದೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಅನುಮತಿ ನೀಡಿದೆ.
.2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.
ಇದನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ವಾದ ಆಲಿಸಿಸ ಕೋರ್ಟ್ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.