ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್​ ಸಾವು

Most read

ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ಕಂಡೆಕ್ಟರ್ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article