ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ

Most read

ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು.

ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು.

ಮೈಸೂರು ನಗರದ ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರು ಬಾರಿ ಸೋಲು ಕಂಡು, 2014ರ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು.‌ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ದ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಸುದ್ದಿಯಾಗಿದ್ದರು. ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

More articles

Latest article