ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದರು.
ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ ಬಹುಮತ ಇಲ್ಲದಿದ್ದರೆ ಆಗುವುದಿಲ್ಲ. ರಾಜ್ಯಸಭೆಯಲ್ಲೂ ನಮಗೆ ಬಹುಮತ ಬೇಕಾಗುತ್ತದೆ. ಎರಡೂ ಕಡೆ 2/3 ರಷ್ಟು ಬಹುಮತ ಬೇಕಾಗುತ್ತದೆ ಎಂದರು.
ಕಾಂಗ್ರೆಸ್ನವರು ಹೆಚ್ಚು ಇದ್ದರೆ ಏನೇ ತಿದ್ದುಪಡಿ ತಂದರೂ ಪಾಸ್ ಆಗಲ್ಲ. ಸಿಎಎ ಜಾರಿಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ. ಸಿಎಎ ತರದಿದ್ದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಯಲ್ಲಿ ಇರಲ್ಲ. ಇದು ದೇಶದ್ರೋಹಿಗಳ ಆಡಂಬರ ಆಗುತ್ತದೆ. ದೇಶ ಸರಿ ಆಗಬೇಕೆಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಆಗಲ್ಲ. ಎಲ್ಲೆಡೆ ಬಹುಮತ ಬರಲಿ, ಆಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಅಂತಾ. ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದರು.