ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್‌ಗಳಲ್ಲಿ ಕೃತಕ ಬಣ್ಣ ನಿಷೇಧ: ಇಂದು ಸರ್ಕಾರದಿಂದ ಅಧಿಕೃತ ಘೋಷಣೆ ಸಾಧ್ಯತೆ

Most read

ಪುದುಚೇರಿ ಮತ್ತು ತಮಿಳುನಾಡಿನ ನಂತರ, ಕರ್ನಾಟಕದಲ್ಲಿಯೂ ಜನಪ್ರಿಯ ಬೀದಿ ಆಹಾರ ಪದಾರ್ಥಗಳ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ನಲ್ಲಿ ಕೃತಕ ಬಣ್ಣಗಳು ಹಾಕುತ್ತಿರುವುದು ಕಂಡುವಂದಿದ್ದು, ಅಂತವನ್ನು ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ ಈ ಕುರಿತು ಇಂದು ಆದೇಶ ಹೊರಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

.ರೋಡಮೈನ್‌-ಬಿ ಅಥವಾ ಆರ್‌ಎಚ್‌ಬಿ ಎಂದು ಕರೆಯುವ ರಾಸಾಯನಿಕವನ್ನು ಜವಳಿ, ಕಾಗದ, ಚರ್ಮ ಮತ್ತು ಬಣ್ಣಗಳ ಉದ್ಯಮದಲ್ಲಿ ಕೆಂಪು ಮತ್ತು ಗುಲಾಬಿ ಬಣ್ಣಕ್ಕಾಗಿ ಬಳಸಲಾಗುತ್ತದೆ. ಈ ರಾಸಾಯನಿಕವು ಆಹಾರದ ಮೂಲಕ ದೇಹ ಸೇರಿದರೆ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಇದು ಕೇವಲ ಹತ್ತಿ ಕ್ಯಾಂಡಿಯಲ್ಲಿಮಾತ್ರವಲ್ಲ; ಸಿಹಿ ತಿಂಡಿಗಳು, ಬಣ್ಣದ ಮಿಠಾಯಿಗಳು, ಕೆಂಪು ಮೆಣಸಿನಕಾಯಿಗಳು, ಮೆಣಸಿನ ಪುಡಿ ಇನ್ನೂ ಅನೇಕ ಸಂಸ್ಕರಿಸಿದ ಆಹಾರಗಳಲ್ಲಿ ಕಂಡು ಬರುತ್ತದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳು (ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಂತ್ರಣ, 2011ರ ನಿಯಮ 16ರ ಅನ್ವಯ ಗೋಬಿ ಮಂಚೂರಿ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಉಪಯೋಗಿಸುವಂತೆ ಇಲ್ಲ. ಇದೇ ನಿಯಮಗಳ ಅನ್ವಯ ಕಾಟನ್‌ ಕ್ಯಾಂಡಿಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣ ಉಪಯೋಗಿಸಲು ಹಾಗೂ ಬಳಸಲು ಅವಕಾಶವೇ ಇಲ್ಲದಿರುವ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

More articles

Latest article