ಚುನಾವಣೆಗು ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದ ಕೇಂದ್ರ

Most read

ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ.

2019 ರ ಪೌರತ್ವ (ತಿದ್ದುಪಡಿ) ಕಾಯಿದೆಯು ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ಸೋಮವಾರ ಪ್ರಕಟಿಸಿದೆ.

ಪೌರತ್ವಕ್ಕಾಗಿ ಅರ್ಜಿಗಳನ್ನು ಸಂಪೂರ್ಣವಾಗಿ ಆನ್‌ಲೈನ್ ಮೂಲಕಚೇ ಸಲ್ಲಿಸಲಾಗುವುದು ಎಂದು ಸಚಿವಾಲಯದ ವಕ್ತಾರರು X ನಲ್ಲಿ ಬರೆದಿದ್ದಾರೆ.

2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಜೈನ್, ಕ್ರಿಶ್ಚಿಯನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ನಾಗರಿಕರಿಗೆ ಪೌರತ್ವವನ್ನು ನೀಡಲು ಕಾನೂನಿನ ನಿಯಮಗಳನ್ನು ಕೇಂದ್ರ ಇಂದು ಘೋಷಿಸಿದೆ.

ಡಿಸೆಂಬರ್ 31, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಉದ್ದೇಶವನ್ನು ಈ ಕಾನೂನು ಹೊಂದಿದೆ.

More articles

Latest article