ಕರ್ನಾಟಕ ಲೋಕಸಭಾ (Karnataka Lokasbha Election) ಅಖಾಡ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ಗೆಲುವಿಗಾಗಿ ರಣತಂತ್ರ ರೂಪಿಸಿದೆ. ಇದೀಗ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ (BJP candidates 2nd List) ರಿಲೀಸ್ ಮಾಡಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಘೋಷಣೆ ಮಾಡಲಾಗಿದೆ.
ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ. ಒಟ್ಟು ಎಂಟು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಘಟಾನುಘಟಿ ನಾಯಕರುಗಳಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.
ಯಾರ ಬದಲಿಗೆ ಯಾರಿಗೆ ಟಿಕೆಟ್?
- ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್ ಚೌಟಾಗೆ ಟಿಕೆಟ್
- ಮೈಸೂರು- ಪ್ರತಾಪ್ ಸಿಂಹ ಬದಲು ಯದುವೀರ ಒಡೆಯರ್ಗೆ ಟಿಕೆಟ್
- ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲು ಶ್ರೀರಾಮುಲುಗೆ ಟಿಕೆಟ್
- ಹಾವೇರಿಯಲ್ಲಿ ಶಿವಕುಮಾರ್ ಬದಲು ಬೊಮ್ಮಾಯಿಗೆ ಟಿಕೆಟ್
- ತುಮಕೂರಿನಲ್ಲಿ G.S.ಬಸವರಾಜು ಬದಲು ಸೋಮಣ್ಣ ಗೆ ಟಿಕೆಟ್
- ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ ಕ್ಯಾವಟರ್ ಗೆ ಟಿಕೆಟ್
- ಬೆಂಗಳೂರು ಉತ್ತರದಿಂದ ಹಾಲಿ ಸಂಸದ ಸದಾನಂದಗೌಡರ ಬದಲು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಟಿಕೆಟ್
- ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಬದಲಿಗೆ ಎಸ್.ಬಾಲರಾಜುಗೆ ಟಿಕೆಟ್
ಯಾರ್ಯಾರಿಗೆ ಟಿಕೆಟ್?
- ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
- ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
- ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
- ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
- ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
- ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
- ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
- ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
- ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
- ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
- ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
- ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
- ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
- ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
- ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
- ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ