ಸುಮಾರು 32 ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೀಗ ಜಡಿದು ಲೈಸೆನ್ಸ್ ಕ್ಯಾನ್ಸಲ್ ಮಾಡಿದ್ದಾರೆ.
ಪದೆ ಪದೆ ತೆರಿಗೆ ವಿಚಾರವಾಗಿ ಸುದ್ದಿಯಲ್ಲಿರುವ ಮಂತ್ರಿ ಮಾಲ್ ಗೆ ಈ ಹಿಂದೆಯೂ ಒಮ್ಮೆ ಬೀಗ ಹಾಕಲಾಗಿತ್ತು. ಇದೀಗ ಮತ್ತೆ ಇಂದು ಮುಖ್ಯ ಪ್ರವೇಶ ದ್ವಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಬೀಗ ಹಾಕಿದ್ದಾರೆ.
ಬೀಗ ಹಾಕಿ ನೋಟಿಸ್ ನೀಡಿದ ಬಿಬಿಎಂಪಿ
ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.