ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ದೇಶಕ್ಕೆ ಈ ಮಾದರಿಯನ್ನು ಅನ್ವಯಿಸಲು ಎಐಸಿಸಿ ಮುಂದಾಗಿದೆ. ಹೌದು, ಲೋಕಸಭಾ ಚುನಾವಣೆ ಹತ್ತಿರವಿದ್ದು, ಜನರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಎರಡು ಹೊಸ ಗ್ಯಾರಂಟಿ ಘೋಷಣೆ ಮಾಡಿದೆ.
ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಎರಡು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಇಂದು ಮಧ್ಯಾಹ್ನ ಎಲೆಕ್ಷನ್ ಕಮಿಷನ್ ಲೋಕಸಭೆ ಚುನಾವಣೆ ಘೋಷಣೆ ಮಾಡಲಿದೆ. ಹೀಗಾಗಿ ಬೆಂಗಳೂರಲ್ಲೇ ಈ ಎರಡು ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದೇವೆ. ಈಗಾಗಲೇ ಯುವ ನ್ಯಾಯ್, ಕಿಸಾನ್ ನ್ಯಾಯ್, ಮಹಿಳಾ ನ್ಯಾಯ್ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಈಗ ಶ್ರಮಿಕ್ ನ್ಯಾಯ್, ಹಿಸ್ಸೇದಾರ್ ನ್ಯಾಯ್ ಗ್ಯಾರಂಟಿ ಘೋಷಣೆ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.
ಈ ಗ್ಯಾರಂಟಿಗಳು ಹಿಂದುಳಿದ ವರ್ಗಗಳು, ಬಡವರಿಗೆ ಅನುಕೂಲ ಆಗುವಂತಾ ಯೋಜನೆಯಾಗಿದೆ. ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮ, ಸಾಮಾಜಿಕ ನ್ಯಾಯ, ಕನಿಷ್ಠ ವೇತನ ಕಾಯ್ದೆ. ಭವಿಷ್ಯ ನಿಧಿ ಕಾಯ್ದೆ, ವಿಮೆ ಕಾಯ್ದೆ ಹೊಸ ಗ್ಯಾರಂಟಿಯಲ್ಲಿ ಇರಲಿದೆ.
ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯಲ್ಲಿ 50% ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಮಾಡಲಾಗುವುದು ಎಂದು ಗ್ಯಾರಂಟಿಯಲ್ಲಿ ಘೋಷಿಸಿದೆ.
ಆದಿವಾಸಿಗಳ ಅರಣ್ಯ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಖಾತರಿ:- ಎಲ್ಲಾ ಬಾಕಿ ಉಳಿದಿರುವ ಅರಣ್ಯ ಹಕ್ಕು ಕಾಯಿದೆ ಕ್ಲೈಮ್‌ಗಳನ್ನು 1 ವರ್ಷದೊಳಗೆ ಪರಿಹರಿಸಲು ಮತ್ತು ತಿರಸ್ಕರಿಸಿದ ಹಕ್ಕುಗಳನ್ನು 6 ತಿಂಗಳಲ್ಲಿ ಪರಿಶೀಲಿಸಲು ಕಾಂಗ್ರೆಸ್ ಖಾತರಿ ನೀಡುತ್ತದೆ. ಸಣ್ಣ ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಖಾತರಿಯನ್ನು ನೀಡುತ್ತದೆ. ಅರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆ ಮತ್ತು ಭೂ ಸ್ವಾಧೀನ ಕಾಯ್ದೆ ಮತ್ತು ಎಲ್ಲಾ ಬುಡಕಟ್ಟು ವಿರೋಧಿ ತಿದ್ದುಪಡಿಗಳನ್ನು ಹಿಂಪಡೆಯುತ್ತೇವೆ ಎಂದು ಗ್ಯಾರಂಟಿಗಳಲ್ಲಿ ಘೋಷಣೆ ಮಾಡಿದೆ.
ನರೇಗಾ ಕಾರ್ಮಿಕರಿಗೆ ಒಂದು ದಿನಕ್ಕೆ 400 ರೂ ಕನಿಷ್ಠ ವೇತನ ನೀಡಲು ಕಾಂಗ್ರೆಸ್ ಗ್ಯಾರಂಟಿಯಲ್ಲಿ ಘೋಷಣೆ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಎಲ್ಲ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಜಾರಿಗೆ ತಂದ ಅನೇಕ ಕಾನೂನುಗಳನ್ನು ಕಳೆದ 10 ವರ್ಷಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸಿದೆ. ನಮ್ಮ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುತ್ತದೆ. ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಅನುದಾನ ನೀಡಿದರೆ ಯೋಜನೆಗಳು ಸರಿಯಾದ ಸಮಯಕ್ಕೆ ಆರಂಭವಾಗುತ್ತದೆ. ಆದರೆ, ತನ್ನ ಪಾಲು ಕೇಳಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಅನೇಕ ಪತ್ರ ಬರೆದಿದೆ. ಸಿಎಂ ಡಿಸಿಎಂ ಇಬ್ಬರೂ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ನರೇಗಾ ಯೋಜನೆಗಳ ಬಗ್ಗೆ ಮೋದಿಗೆ ಆಸಕ್ತಿ ಇಲ್ಲ. ನರೇಗಾ ಯೋಜನೆ ಅಡಿ ಕಾರ್ಮಿಕ ಹಣ ಪಾವತಿ ಆಗುತ್ತಿಲ್ಲ. ಇಂತಹ ಯೋಜನೆಗಳ ಬಗ್ಗೆ ಮೋದಿ ಸರ್ಕಾರ ನಿರ್ಲಕ್ಷ ವಹಿಸುತ್ತಿದೆ. ಮೋದಿಗೆ ಬಡವರ ಮೇಲೆ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.
ಮೋದಿಗೆ ಬಡವರ ಮೇಲೆ ಕಾಳಜಿ ಇಲ್ಲ. ಶ್ರೀಮಂತರ ಪರವಾಗಿ ಮೋದಿ ಇದ್ದಾರೆ. ಜಾತಿ ಗಣತಿಯಿಂದ ಸಮುದಾಯ ಅಭಿವೃದ್ದಿ ಸಾಧ್ಯ ಆದರೆ ಮೋದಿ ಸರ್ಕಾರ ಇದನ್ನು ವಿರೋಧಿಸುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ ಜಾತಿಗಣತಿ ಸಲ್ಲಿಕೆಯಾಗಿದೆ. ಶೀಘ್ರದಲ್ಲೇ ಆ ಕುರಿತು ನಿರ್ಣಯ ಕೈಗೊಳ್ಳುತ್ತೇವೆ. ಆದರೆ, ಮೋದಿ ಮಾತ್ರ ಜಾತಿಗಣತಿಗೆ ವಿರೋಧ ಮಾಡುತ್ತಿದ್ದಾರೆ. ಜಾತಿಯಿಂದ ಹೊರಬರುವುದು ಮೋದಿಗೆ ಇಷ್ಟವಿಲ್ಲ. ಮೋದಿ ಒಬ್ಬ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದರೂ ಜಾತಿಗಣತಿಯನ್ನು ವಿರೋಧಿಸುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ಮಾಡುವುದು ಗ್ಯಾರಂಟಿ’ ಎಂದು ಖರ್ಗೆ ಘೋಷಣೆ ಮಾಡಿದರು.
ಕಾಂಗ್ರೆಸ್ ಘೋಷಣೆ ಮಾಡಿದ ಪ್ರಮುಖ ಗ್ಯಾರಂಟಿಗಳು ಇಲ್ಲಿವೆ:-