ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ: ಇಂದು ಮಹತ್ವದ ವಿಚಾರಣೆ!

Most read

ಲೋಕಸಭಾ ಚುನಾವಣೆ ಸಮೀಪ ಇರುವಂತಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಇಂದು ಅದರ ವಿಚಾರಣೆ ನಡೆಸುವ ಸುಪ್ರೀಂ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಲಿದೆ.

ಪ್ರಮುಖ ಕಳೆದ ವಾರ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್‌ಗೆ ಕೇರಳ ಮೂಲದ ರಾಜಕೀಯ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (DYFI), ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ತೃಣಮೂಲ ನಾಯಕ ಮಹುವಾ ಮೊಯಿತ್ರಾ ಮತ್ತು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ  ಸಲ್ಲಿಸಿದ ಮನವಿಯನ್ನು ಪ್ರಸ್ತಾಪಿಸಿ, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ ವಿವಾದಾತ್ಮಕ ಕಾನೂನನ್ನು ಜಾರಿಗೊಳಿಸುವ ಕೇಂದ್ರದ ಕ್ರಮವು ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದರು.

ಕೇಂದ್ರವು ಸಿಎಎ ಮಾರ್ಗಸೂಚಿ ಬಿಡುಗಡೆ ಮಡಿದ ಮರುದಿನವೇ, ಕಾನೂನಿನ ಅನುಷ್ಠಾನಕ್ಕೆ ವಿರಾಮ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ತಾರತಮ್ಯ ಉಂಟುಮಾಡುತ್ತದೆ ಮತ್ತಿದು ಆರ್ಟಿಕಲ್ 14 ರ ಅಡಿಯಲ್ಲಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದ ಮಂಡಿಸಿದ್ದಾರೆ.

2019 ರಲ್ಲಿ, ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದಾಗ, ಅದರ ವಿರುದ್ಧ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ನಿಯಮಾವಳಿಗಳನ್ನು ತಿಳಿಸದ ಕಾರಣ ನ್ಯಾಯಾಲಯ ಅದರ ಅನುಷ್ಠಾನಕ್ಕೆ ವಿರಾಮ ನೀಡಿರಲಿಲ್ಲ. ಶುಕ್ರವಾರ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನಿಯಮಗಳನ್ನು ತಿಳಿಸದ ಕಾರಣ ವಿರಾಮ ನೀಡುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆಗ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣೆಗೂ ಮುನ್ನವೇ ನಿಯಮಾವಳಿಗಳನ್ನು ಅಧಿಸೂಚನೆ ಹೊರಡಿಸಿರುವುದು ಅಪ್ರಸ್ತುತ ಎಂದು ವಾದ ಮಂಡಿಸಿದ್ದಾರೆ.

ಮಾರ್ಚ್ 11 ರಂದು, ಕೇಂದ್ರ ಸರ್ಕಾರವು ಡಿಸೆಂಬರ್ 2019 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಸಿಎಎಯನ್ನು ಜಾರಿಗೆ ತಂದಿತು. ಇದನ್ನು ವಿರೋಧಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಮಾಡಲಾಯಿತು. ಆದರೆ, ಕೊರೊನಾ ಕಾರಣದಿಂದಾಗಿ ಪ್ರತಿಭಟನೆ ಸ್ಥಗಿತವಾಗಿತ್ತು.

2019 ರಲ್ಲಿ ಸಂಸತ್ತು ಅಂಗೀಕರಿಸಿದ ಸಿಎಎ ನಿಯಮಗಳು, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ.

More articles

Latest article