ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಂಧಿಸುವ ಎಲ್ಲ ಸಾಧ್ಯತೆಗಳಿವೆ.

ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾದ ಬೆನ್ನಲ್ಲೇ ಇಡಿ ಅಧಿಕಾರಿಗಳು ಸಿಎಂ ನಿವಾಸವನ್ನು ಸುತ್ತುವರೆದಿದ್ದಾರೆ.

ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರಿ ದಿಲ್ಲಿ ಹೈಕೋರ್ಟ್ ನಲ್ಲಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಆದರೆ ಕೇಜ್ರಿವಾಲ್ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಅಬಕಾರಿ ಹಗರಣ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿತ್ತಾದರೂ, ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ.

ವಿಚಾರಣೆಗೆ ಹಾಜರಾದರೆ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅರವಿಂದ ಕೇಜ್ರಿವಾಲ್ ಹೈಕೋರ್ಟ್ ಮೊರೆಹೋಗಿದ್ದರು. ಆದರೆ ಹೈಕೋರ್ಟ್ ನಲ್ಲೂ ಅವರಿಗೆ ಹಿನ್ನೆಡೆಯಾದ ಹಿನ್ನೆಲೆಯಲ್ಲಿ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್ ನಿವಾಸಕ್ಕೆ ಧಾವಿಸಿದ್ದಾರೆ. ಕೆಲವೇ ಕ್ಷಣಗಳನ್ನು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

More articles

Latest article

Most read