ಲೋಕಸಭಾ ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಿವೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರುತ್ತಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಾಲಾಗಿದೆ.
ಭಾನುವಾರ ಸಂಜೆ ಜನಾರ್ದನ ರೆಡ್ಡಿ ಅವರು ತಮ್ಮ ಬೆಂಬಲಿಗರ ಸಭೆ ಕರೆದಿದ್ದು ಸೋಮವಾರ ಅಥವಾ ಮಂಗಳವಾರ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದಷ್ಟೇ ಜನಾರ್ದನ ರೆಡ್ಡಿ ಅವರು ಬಿಜೆಪಿ ಹೈಕಮಾಂಡ್ ನಾಯಕರಾಗಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಜನಾರ್ದನ ರೆಡ್ಡಿ ಅವರು, ಅಮಿತ್ ಶಾ ಅವರ ಆಹ್ವಾನದ ಹಿನ್ನೆಲೆಯಲ್ಲಿ ದಿಲ್ಲಿಗೆ ಆಗಮಿಸಿದ್ದೇನೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಈ ಭೇಟಿ ಮಾಡಿದ್ದು ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನ ಎಂದು ತಿಳಿಸಿದ್ದರು ಆದರೆ ಮತ್ತೆ ಬಿಜೆಪಿಗೆ ಸೇರುವ ವಿಚಾರವಾಗಿ ಯಾವುದೇ ವಿಚಾರವನ್ನೂ ಸ್ಪಷ್ಟಪಡಿಸಿರಲಿಲ್ಲ.