ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

Most read

ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ.

ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ಮಾಹಿತಿ ತಿಳಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್‍ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪೊಲೀಸ್ ಭದ್ರತೆ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

ಮೊದಲ ದಿನ: ಮಾರ್ಚ್ 25, 2024

ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್​​​​ಸಿಇಆರ್​​ಟಿ), ಸಂಸ್ಕೃತ (ಪ್ರಥಮ ಭಾಷೆ)

27-3-2024: ಸಮಾಜ ವಿಜ್ಞಾನ

30-03-2024: ವಿಜ್ಞಾನ

02-04-2024: ಗಣಿತ

03-04-2024: ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್‌)

04-04-2024: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ)

06-04-2024: ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)

More articles

Latest article