ಮಾಜಿ MLC ತೇಜಸ್ವಿನಿ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ.  ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆ

ರಾಜ್ಯ ಬಿಜೆಪಿಗೆ ಮತ್ತೊಂದು ವಿಷಾದದ ಸಂಗತಿ. ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತಾಡಿದ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಲ್ಲದೆ, ಬಿಜೆಪಿ ವಿರುದ್ದ ಕಟುವಾಗಿ ಮಾತನಾಡಿದರು. ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯಿಂದ ಮೈಸೂರು ಟಿಕೆಟ್‌ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಇದರಿಂದ  ಅಸಮಾಧಾನಗೊಂಡಿದ್ದ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ಈ ನಡುವೆ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೂ ಸಹ ರಾಜೀನಾಮೆ ನೀಡಿದ್ದರು.

More articles

Latest article

Most read