ಬಿಜೆಪಿಯಿಂದ ಪಂಚಮಸಾಲಿಗಳಿಗೆ ಅನ್ಯಾಯ: ಹರಿಹರದ ವಚನಾನಂದ ಸ್ವಾಮೀಜಿ

ಹರಿಹರ: ಪಂಚಮಸಾಲಿ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಬಿಜೆಪಿ, ಕರ್ನಾಟಕದಲ್ಲಿ ನಮ್ಮ ಸಮುದಾಯವನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ದೂರಿದ್ದಾರೆ.

ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅಸಮಾಧಾನ ಹಂಚಿಕೊಂಡಿರುವ ಶ್ರೀಗಳು, ಕರ್ನಾಟಕದಲ್ಲಿ ಬಿಜೆಪಿ 9 ಜನ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಿದೆ. ಇದರಲ್ಲಿ ಶೇ.10 ರಷ್ಟು ಜನಸಂಖ್ಯೆಯನ್ನೂ ಹೊಂದಿಲ್ಲದ ಸಮುದಾಯಕ್ಕೆ ನಾಲ್ಕು ಟಿಕೆಟ್ ನೀಡಿದೆ. ಅತಿ ಹೆಚ್ಚು ಜನಸಂಖ್ಯೆ ಇರುವ ಪಂಚಮಸಾಲಿ ಸಮುದಾಯಕ್ಕೆ ಕೇವಲ ಒಂದೇ ಒಂದು ಟಿಕೆಟ್ ನೀಡಿದ್ದಾರೆ.

ಇದು ಬಿಜೆಪಿಯಿಂದ ಪಂಚಮಸಾಲಿ ಸಮುದಾಯಕ್ಕೆ ಆಗಿರುವ ಅನ್ಯಾಯ. ಇದರಿಂದ ಬಿಜೆಪಿ ನಮ್ಮ ಸಮುದಾಯವನ್ನು ಸಂಪೂರ್ಣವಾಗಿ ಅಲಕ್ಷ್ಯ ಮಾಡಿರುವುದು ತಿಳಿಯುತ್ತದೆ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

More articles

Latest article

Most read