ಬೆಂಗಳೂರು: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 4ರಂದು ಕಡೆಯ ದಿನವಾಗಿದೆ. ನಾಳೆ ಕಾಂಗ್ರೆಸ್ ಕೆಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಎಷ್ಟು ಗಂಟೆಗೆ, ಯಾವೆಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣದಿಂದ ಸೌಮ್ಯರೆಡ್ಡಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮಂಡ್ಯದಿಂದ ವೆಂಕಟರಮಣೇಗೌಡ ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಾರೆ.
ಹಾಸನದಲ್ಲಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಏ.2 ರಂದು ಉಡುಪಿ- ಚಿಕ್ಕಮಗಳೂರು ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಏ.3 ರಂದು ಮನ್ಸೂರ್ ಅಲಿಖಾನ್, ರಾಜೀವ್ ಗೌಡ, ಸುನೀಲ್ ಬೋಸ್, ಎಂ ಲಕ್ಷ್ಮಣ್, ಪದ್ಮರಾಜ್ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಏ.4 ರಂದು ತುಮಕೂರು ಕ್ಷೇತ್ರದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇನ್ನು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದ್ದು, ಏ.15 ಹಾವೇರಿ ಕ್ಷೇತ್ರದ ಆನಂದ್ ಸ್ವಾಮಿ ಗಡ್ಡದೇವರಮಠ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಏ.15 ಕ್ಕೆ ಶಿವಮೊಗ್ಗ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ, ಏ.16 ರಂದು ಕೊಪ್ಪಳ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ನಾಮಪತ್ರ ಸಲ್ಲಿಕೆ, ಏ. 18 ಕ್ಕೆ ರಾಯಚೂರು ಅಭ್ಯರ್ಥಿ ಕುಮಾರ್ ನಾಯಕ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.