ಮೈಸೂರಿನಲ್ಲಿ ಇಂದು-ನಾಳೆ ಸಿಎಂ ಸಿದ್ಧರಾಮಯ್ಯ ಅಬ್ಬರದ ಪ್ರಚಾರ

Most read

ಮೈಸೂರು: ತಮ್ಮ ತವರು ನೆಲ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಲಿದ್ದು, ಇಂದು-ನಾಳೆ ಮೈಸೂರಿನಲ್ಲೇ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ನಂಜನಗೂಡು ತಾಲ್ಲೂಕಿನ ಬಿಳಿಗೆರೆಗೆ ಆಗಮಿಸಲಿರುವ ಸಿದ್ಧರಾಮಯ್ಯ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನಂತರ ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6 ಗಂಟೆಗೆ ಮೈಸೂರಿನ ಬಿಷಪ್ ಅವರನ್ನು ಭೇಟಿ ಮಾಡಲಿರುವ ಅವರು ಮೈಸೂರಿನಲ್ಲೇ ವಾಸ್ತವ್ಯ ಮಾಡಲಿದ್ದು, ಜಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುವರು.

ನಾಳೆ ಬೆಳಿಗ್ಗೆ ಶಂಕರಮಠಕ್ಕೆ ಭೇಟಿ ನೀಡುವ ಸಿದ್ಧರಾಮಯ್ಯ, ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಪಕ್ಷದ ಮೈಸೂರು ಘಟಕದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದ್ದು, ಬಿಜೆಪಿ-ಜೆಡಿಎಸ್ ಪಕ್ಷಗಳ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರೊಂದಿಗೆ ಸಿದ್ಧರಾಮಯ್ಯ ಮಾತುಕತೆ ನಡೆಸಿ ನಂತರ ಮೈಸೂರಿನಲ್ಲಿಯೇ ತಂಗಲಿದ್ದಾರೆ.

More articles

Latest article