ಆದಾಯ ತೆರಿಗೆ ನೋಟಿಸ್: ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್ ನಲ್ಲಿ ಬಿಗ್ ರಿಲೀಫ್

Most read

ಹೊಸದಿಲ್ಲಿ: ತೆರಿಗೆ ಮತ್ತು ದಂಡದ ರೂಪವಾಗಿ 3,500 ಕೋಟಿ ರುಪಾಯಿ ಪಾವತಿಸುವಂತೆ ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಚುನಾವಣೆ ಕಳೆಯುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಮುಚ್ಚಳಿಕೆ ನೀಡಿದೆ.

ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸದ್ಯದ ಮಟ್ಟಿಗೆ ಸಣ್ಣ ಜಯ ಲಭಿಸಿದ್ದು, ಐಟಿ ನೋಟಿಸ್ ನಿಂದಾಗಿ ಪಕ್ಷ ಎದುರಿಸುತ್ತಿದ್ದ ಸಮಸ್ಯೆ ತಾತ್ಕಾಲಿಕವಾಗಿ ಶಮನಗೊಂಡಿದೆ.

ಐಟಿ ನೋಟಿಸ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಚುನಾವಣೆ ಕಳೆಯುವವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಆದಾಯ ತೆರಿಗೆ ಇಲಾಖೆಗೆ ಆದೇಶಿಸಿತು. ಕೋರ್ಟ್ ಆದೇಶದಂತೆ ತಾನು ನೀಡಿರುವ ನೋಟಿಸ್ ಸಂಬಂಧ ಚುನಾವಣೆವರೆಗೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಪರ ವಕೀಲರು ವಾಗ್ದಾನ ನೀಡಿದರು.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸುತ್ತಿದೆ.

More articles

Latest article