ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ಅಭಿಯಾನ ಶುರು : ಯಾರಿಗೆಲ್ಲ ಈ ಲಸಿಕೆ?

Most read

ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನ ತಪ್ಪಿಸಲು ಮತ್ತೆ ಕೊವಿಡ್ ವ್ಯಾಕ್ಸಿನ್ ಮೊರೆ ಹೋಗಲಾಗ್ತಿದೆ.

ರಾಜ್ಯದಲ್ಲಿ ಜನವರಿ 2, 2024 ರಿಂದ ಮತ್ತೆ ಲಸಿಕೆ ಅಭಿಯಾನ ಶುರು ಮಾಡಲಾಗ್ತಿದೆ. ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ಮುಂದಾಗಿದೆ ಆರೋಗ್ಯ ಇಲಾಖೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ರಾಜ್ಯದಲ್ಲಿ ಕೋವಿಡ್‌ನಿಂದ ಸಂಭವಿಸಬಹುದಾದ ಸಾವುಗಳನ್ನ ತಡೆಯಲು ವ್ಯಾಕ್ಸಿನ್ ಅಸ್ತ್ರ ಪ್ರಯೋಗ ಮಾಡಲಾಗ್ತಿದೆ. ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಡೋಸ್ ಶೇಕಡ 100ರಷ್ಟು ವ್ಯಾಕ್ಸಿನೇಷನ್‌ ಮಾಡಲಾಗಿದೆ. ಆದರೂ ಪ್ರಿಕಾಶನರಿ ಮುನ್ನೆಚ್ಚರಿಕಾ ವ್ಯಾಕ್ಸಿನ್ ಶೇಕಡಾ 27ರಷ್ಟು ಜನರು ಮಾತ್ರ ಪಡೆದಿದ್ದಾರೆ. ರಾಜ್ಯದಲ್ಲಿ ಇನ್ನು ಒಂದೂವರೆ ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ವ್ಯಾಕ್ಸಿನ್ ಪಡೆಯಲು ಅಹರ್ತೆ ಪಡೆದಿದ್ದಾರೆ. ಹೀಗಾಗಿ ಪ್ರಿಕಾಶನರಿ ವ್ಯಾಕ್ಸಿನ್ ಹಾಕುವುದಕ್ಕೆ ಸರ್ಕಾರ ಮುಂದಾಗಿದೆ.

ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದ್ದು, ಸದ್ಯ 15,800 ಲಸಿಕೆಯನ್ನು ಈಗಾಗಲೇ ಖರೀದಿ ಮಾಡಲಾಗಿದೆ. ಇಂದಿನಿಂದಲೇ ಲಸಿಕೆಗಳನ್ನ ರಾಜ್ಯದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ವ್ಯಾಕ್ಸಿನ್ ರವಾನೆ ಮಾಡಲು ನಿರ್ಧಾರ ಮಾಡಲಾಗಿದೆ. ಈಗ ಯಾರು ಮೂರನೇ ಲಸಿಕೆ ಪಡೆದಿಲ್ಲ ಅವರೆಲ್ಲ ಮುನ್ನೆಚ್ಚರಿಕಾ ದೃಷ್ಟಿಯಿಂದ ವ್ಯಾಕ್ಸಿನ್ ಪಡೆಯುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೋಮಾರ್ಬಿಟಿಸ್ ಹಾಗೂ ಗಂಭೀರ ಆರೋಗ್ಯ ಸಮಸ್ಯಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

More articles

Latest article