ಕೆ.ಶಿವರಾಮ್ ಪತ್ನಿ ಇಂದು ಕಾಂಗ್ರೆಸ್ ಸೇರ್ಪಡೆ

Most read

ಬೆಂಗಳೂರು: ಇತ್ತೀಚಿಗಷ್ಟೇ ನಿಧನರಾದ ಮಾಜಿ ಐಎಎಸ್ ಅಧಿಕಾರಿ ದಿವಂಗತ ಕೆ.ಶಿವರಾಮ್ ಅವರ ಪತ್ನಿ ವಾಣಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷದ ಕಚೇರಿಯಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

2013ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಸೇರಿ ರಾಜಕೀಯ ಜೀವನ ಆರಂಭಿಸಿದ್ದ ಕೆ.ಶಿವರಾಮ್ 2014ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ನಂತರ ಭಾರತೀಯ ಜನತಾಪಕ್ಷ ಸೇರ್ಪಡೆಯಾಗಿದ್ದರು. ಛಲವಾದಿ ಮಹಸಭಾದ ಅಧ್ಯಕ್ಷರೂ ಆಗಿದ್ದ ಕೆ ಶಿವರಾಮ್ ಸೇವೆಯಲ್ಲಿದ್ದಾಗ ದುರ್ಬಲ ವರ್ಗಗಳಿಗೆ ಸಹಾಯ ಮಾಡಿ ಹೆಸರುವಾಸಿಯಾಗಿದ್ದರು.

ಕಳೆದ ಫೆಬ್ರವರಿ 29ರಂದು ಹೃದಯಾಘಾತದಿಂದ ಅವರು ಮೃತಪಟ್ಟಿದ್ದರು. ಇದೀಗ ಶಿವರಾಮ್‌ ಅವರ ಪತ್ನಿ ವಾಣಿ ಕಾಂಗ್ರೆಸ್‌ ಪಕ್ಷ ಸೇರುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ.

More articles

Latest article