ಕ್ಷುಲ್ಲಕ ವಿಚಾರಕ್ಕೆ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಮಗನ ಮೇಲೆ ಗಂಭೀರ ಹಲ್ಲೆ

Most read

ಧ್ವನಿ ವರ್ಧಕದ ಸೌಂಡ್‌ ಕಡಿಮೆ ಮಾಡಿ ಎಂದು ಹೇಳಿದ್ದಕ್ಕೆ ಸಾಹಿತಿ-ಸಂಶೋಧಕ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಮಗ ಮೇಘವರ್ಷ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕೋಲಾರ ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿಯ ಮುನೇಶ್ವರ ದೇವಾಲಯ ಬಳಿ ಈ ಘಟನೆ ನಡೆದಿದೆ.

ಪಾಪರಾಜನಹಳ್ಳಿ ಗ್ರಾಮದ ಬಳಿ ಇರುವ ಮುನೇಶ್ವರ ದೇವಾಲಯದಲ್ಲಿ ಪ್ರತಿದಿನ ಬೆಳಿಗ್ಗೆ ಸಂಜೆ ಧ್ವನಿವರ್ಧಕ ಸೌಂಡ್ ಹೆಚ್ಚು ಮಾಡುತ್ತಿದ್ದರು, ಇಂದು ಬೆಳಿಗ್ಗೆ ಧ್ವನಿವರ್ಧಕ ಸೌಂಡ್ ಕಡಿಮೆ ಮಾಡಿ ಓದಲು ತೊಂದರೆ ಆಗುತ್ತೆ ಎಂದು ಕೋಟಿಗಾನಹಳ್ಳಿ ರಾಮಯ್ಯ ವಿನಂತಿಸಿದ್ದರು.

ಕೋಟಿಗಾನಹಳ್ಳಿ ರಾಮಯ್ಯ ಅವರ ಕಣ್ಣು ಹಾಗೂ ತಲೆಗೆ ಮಂಜುನಾಥ್, ಬೈರಪ್ಪ, ಸುಬ್ಬು ಸೇರಿದಂತೆ ಇತರರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಒಳಗಾದ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಮಗ ಮೇಘವರ್ಷ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದವರ ಪೈಕಿ ಮಂಜುನಾಥ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯನವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ವ್ಯಾಪಕ ಖಂಡನೆ

ರಾಮಯ್ಯ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುವಂತೆ ಒತ್ತಾಯ

ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು,

More articles

Latest article