ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ ಅಂದರೆ ಏನರ್ಥ : ಸಿಎಂ ಸಿದ್ದರಾಮಯ್ಯ

Most read

ಮಡಿಕೇರಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದು, ಆ ಹೇಳಿಕೆ ವಿರುದ್ದ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ. ಮಡಿಕೇರಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಹೆಚ್ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ದಾರಿತಪ್ಪಿದ್ದಾರೆ ಅಂದರೆ ಏನರ್ಥ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದವರು. ಹೆಣ್ಣುಮಕ್ಕಳ ಬಗ್ಗೆ ಹೀಗೆ ಮಾತನಾಡಿದರೆ ಹೇಗೆ..? ಹೆಣ್ಣು ಮಕ್ಕಳು ಇದನ್ನು ಸಹಿಸಿಕೊಳ್ಳುತ್ತಾರಾ..? ಎಂದು ಪ್ರಶ್ನೆ ಮಾಡಿದ್ದಾರೆ.

ಎಲ್ಲವುಗಳ ಬೆಲೆ ಜಾಸ್ತಿ ಮಾಡಿ ಗ್ಯಾರಂಟಿ ಯೋಜನೆ ಮಾಡಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಮಾತನಾಡಿ, ಮದ್ಯ, ಸ್ಟಾಂಪ್ ಡ್ಯೂಟಿ ದರ ಹೆಚ್ಚಳದಿಂದ ಸರ್ಕಾರಕ್ಕೆ ಎಷ್ಟು ಆದಾಯ ಬರುತ್ತೆ ಅಂತ ವಿಜಯೇಂದ್ರಗೆ ಗೊತ್ತೋ..? ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 58 ಸಾವಿರ ಕೋಟಿ ಬೇಕು. ಕೆಲವು ದರ ಹೆಚ್ಚಳದಿಂದ ಸರ್ಕಾರಕ್ಕೆ ಇಷ್ಟು ಆದಾಯ ಬರುತ್ತದೆಯೇ.? ಇದನ್ನು ವಿಜಯೇಂದ್ರಗೆ ಕೇಳಿ. ಸುಮ್ಮನೇ ಏನೋ ಹೇಳಬೇಕು ಎಂದು ಹೇಳುವುದಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More articles

Latest article