Saturday, December 7, 2024

ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿ ಆತ್ಮಹತ್ಯೆ

Most read

ಮಂಗಳೂರು: ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆಯಾಗಿದೆ. ಅಕ್ಟೋಬರ್ 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳು ಧರ್ಮಸ್ಥಳದ  ನೇತ್ರಾವತಿ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಶವ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಪತ್ತೆಯಾಗಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಅಕ್ಟೋಬರ್ 31 ರಂದು ದಂಪತಿಗಳು ಕಾಣೆಯಾಗಿದ್ದರು. ಈ ಬಗ್ಗೆ ಅನುಮಾನಗೊಂಡ ಕುಟುಂಬದ ಸದಸ್ಯರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದರು.  ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಪೊಲೀಸರ ಸಹಕಾರದಲ್ಲಿ  ಶೌರ್ಯ ತಂಡ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ವಿವಿಧ ಭಾಗಗಗಳಲ್ಲಿ ಹುಡುಕಾಟ ನಡೆಸಿದ್ದರು. ಅಂತಿಮವಾಗಿ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಪತ್ತೆಯಾಗಿದ್ದವು.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ನವೆಂಬರ್ 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯ ಪಡಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

More articles

Latest article