ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್‌ ಪೆಡ್ಲರ್‌ವೊಬ್ಬನನ್ನು ಬಂಧಿಸಿ ರೂ. 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌ ವಶಪಡಿಸಿಕೊಂಡಿದ್ದಾರೆ. ಯುಜೋವುಂ
ಲಿವೋನಸ್‌ ಬಂಧಿತ ನೈಜೀರಿಯಾ ಪ್ರಜೆ. ಲಕ್ಕಸಂದ್ರದ ಸಮೀಪ ಎಂಡಿಎಂಎ ಕ್ರಿಸ್ಟಲ್ ಅನ್ನು ಮಾರಾಟ ಮಾಡುತ್ತಿದ್ದ ಈತನನ್ನು ಬಂಧಿಸಿ 1.3 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಈತ 2018ರಲ್ಲಿ ಮುಂಬೈನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಈತನನ್ನು ಬಂಧಿಸಿ ಎನ್‌ ಡಿಪಿಎಸ್‌ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು, ಈಗ ಮತ್ತೊಮ್ಮೆ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ದೇಶ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸಿಕೊಂಡು ಪರಿಚಿತ ಪೆಡ್ಲರ್‌ ಗಳಿಗೆ ಮಾರಾಟ ಮಾಡುತ್ತಿದ್ದ. ನಂತರ ಇವರು ಕಾಲೇಜು ವಿದ್ಯಾರ್ಥಿಗಳು ಮತ್ತು ಪರಿಚಯಸ್ಥ ಗ್ರಾಹಕರಿಗೆ
ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

More articles

Latest article

Most read