ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ, ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಬುಲೆಟ್ ಕೂಡ ಸಿಕ್ಕಿದೆ. ಮೃತ ವ್ಯಕ್ತಿ ಬನ್ನೇರುಘಟ್ಟದ ಗೊಟ್ಟಿಗೆರೆ ಮೂಲದವರಾಗಿದ್ದು, ಗುಜರಿ ವ್ಯಾಪಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗಾಗಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ

