ಬೀದರ್: ಬೆಂಗಳೂರಿನ ವಿಷ್ಣುವರ್ಧನ್ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋಗೆ ಭೂಮಿ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಆದರೆ ದಿವಂಗತ ನಟ ಬಾಲಕೃಷ್ಣ ಅವರ ಕುಟುಂಬದ ಸದಸ್ಯರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಬಾಕಿ ಉಳಿದಿರುವ 10 ಎಕರೆ ಅರಣ್ಯ ಭೂಮಿಯನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್.ಎಂ.ಟಿ. ವಶದಲ್ಲಿರುವುದು ಅರಣ್ಯ ಭೂಮಿ ಎಂದು ತಮಗೆ ತಿಳಿದ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಅದೇ ರೀತಿ ಯಾವುದು ಅರಣ್ಯ ಭೂಮಿಯೋ ಅದು ಅರಣ್ಯವಾಗಿ ಉಳಿಯತ್ತೆ ಎಂದರು.
ಮೇರುನಟ ದಿವಂಗತ ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡುತ್ತಾರೆ ಎಂದು ಉತ್ತರಿಸಿದರು.