ಮುಸ್ಲಿಂ ಸಮುದಾಯದ ನಿಂದನೆ: ಪ್ರತಾಪ ಸಿಂಹ ವಿರುದ್ಧ ದೂರು ದಾಖಲು

Most read

ಮೈಸೂರು: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೈಯದ್ ಅಬ್ರಾರ್ ಉದಯಗಿರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಪ್ರತಾಪ ಸಿಂಹ ಅವರು ಮುಸ್ಲಿಂ ಸಮುದಾಯ ಜನಸಂಖ್ಯೆ ಜಾಸ್ತಿ ಮಾಡಿಕೊಂಡು, ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

More articles

Latest article