ಹಾವೇರಿ: ಭೀಕರ ಅಪಘಾತ, 6 ಮಂದಿ ದುರ್ಮರಣ

Most read

ಹಾವೇರಿ: ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ದುರಂತ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಹರಿಯಾಣ ಮೂಲದ ಆಡಿ ಕಾರು ಎಂದು ಗೊತ್ತಾಗಿದೆ.

ಮೃತರನ್ನು ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17), ತಷ್ಕಿನ್ ಮತ್ತು ಪಿರೋಜ್ ಮೃತಪಟ್ಟಿದ್ದಾರೆ.

More articles

Latest article