ಪಂಜಾಬ್‌ ನಲ್ಲಿ ಅಪಘಾತ; ಬೆಂಗಳೂರಿಗೆ ಕುರುಬೂರು ಶಾಂತಕುಮಾರ್‌ ಏರ್‌ ಲಿಫ್ಟ್

Most read

ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಪಂಜಾಬ್‌ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸದ್ಯ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ.

ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನುಮೂಳೆಗೆ ತೀವ್ರ ಗಾಯವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಸೋಮಣ್ಣ ಮುಂದಾಗಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ.

More articles

Latest article