ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಬರ್ಬರ ಹತ್ಯೆ

ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸ್ವಾಮೀಜಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.

ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು ಮಾಲೂರಿನ ಸಂತಹಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಗಳ ಬೆಂಬಲಿಗರ ಗುಂಪಿನ ನಡುವೆ ಗಲಾಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಧರ್ಮಪ್ರಾಣಾನಂದ ಸ್ವಾಮೀಜಿ ಬೆಂಬಲಿಗರ ಗುಂಪಿನಿಂದ ಚಿನ್ಮಯಾನಂದ ಸ್ವಾಮೀಜಿ ಹತ್ಯೆಯಾಗಿದೆ.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಆಶ್ರಮದ ಜಾಗಕ್ಕಾಗಿ ಬಹುದಿನಗಳಿಂದ ವಿವಾದ ನಡೆಯುತ್ತಿತ್ತು.

ಕಳೆದ ಹಲವು ವರ್ಷಗಳಿಂದ ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಬೆಳಿಗ್ಗೆ ವಕೀಲರಿಗೆ ದಾಖಲೆ ಒದಗಿಸಲು ಹೋಗುವ ವೇಳೆ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ

ಗಂಭೀರ ಗಾಯಗೊಂಡ ಚಿನ್ಮಯಾನಂದ ಅವರನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ.

ಇದೀಗ ಆರೋಪಿಗಳಾದ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನ ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article

Most read