ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಿದರೆ ಕ್ರಮ : ಕೆ. ಹೆಚ್‌.ಮುನಿಯಪ್ಪ

ಗೃಹ ಬಳಕೆ ಅನಿಲ ಸಿಲಿಂಡರ್‌ ಪೂರೈಕೆಯಲ್ಲಿ ಸಮಸ್ಯೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ  ಕೊರತೆಯಿದೆ ಎಂಬ ಸುಳ್ಳು ಮತ್ತು ಆಧಾರರಹಿತ ವದಂತಿಗಳನ್ನು  ಸಾಮಾಜಿಕ ಜಾಲ ತಾಣಗಳಲ್ಲಿ ಹರಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ತಿಳಿಸಿದರು.

ವಿಧಾನ ಪರಿಷತ್ತಿನ ಕಲಾಪದ ವೇಳೆ, ಪರಿಷತ್ ಸದಸ್ಯರಾದ ರಮೇಶ್ ಬಾಬು, ಶಿವಕುಮಾರ್ ಕೆ, ಐವಾನ್ ಡಿಸೋಜ, ರಾಮೋಜಿಗೌಡ, ಜಗದೇವ ಗುತ್ತೇದಾರ್ ಹಾಗೂ ರಾಜೇಂದ್ರ ರಾಜಣ್ಣ ಅವರು ನಿಯಮ 330 ಅಡಿ ಮಂಡಿಸಲಾದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹರಡುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಇಂತಹ ವದಂತಿಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಬಾರದು ಎಂದು ಹೇಳಿದರು.

ಕೇಂದ್ರ ಸರ್ಕಾರದ ಮಾಹಿತಿಯಂತೆ ದೇಶ ವ್ಯಾಪಿ ಇಂಧನ ಮತ್ತು ಎಲ್‍ಪಿಜಿ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಪೆಟ್ರೋಲ್ ಬಂಕ್‍ಗಳು ಮತ್ತು ಎಲ್‍ಪಿಜಿ ವಿತರಕರಲ್ಲಿ ಯಾವುದೇ ಕೊರತೆ ಉಂಟಾಗಿಲ್ಲ. ಸಾರ್ವಜನಿಕರು ಆತಂಕದಿಂದ ಅತಿಯಾಗಿ ಖರೀದಿಸುವುದರಿಂದ ಸರಬರಾಜು ವ್ಯವಸ್ಥೆಯಲ್ಲಿ ಅನಗತ್ಯ ಅಸ್ತವ್ಯಸ್ತ ಉಂಟಾಗುತ್ತಿದೆ ಎಂದು ತಿಳಿಸಿದರು.

ಗೃಹಬಳಕೆದಾರರಿಗೆ ಆದ್ಯತೆ:  ಕೇಂದ್ರ ಸರ್ಕಾರದ ಆದೇಶದಂತೆ, ಎಲ್ಲಾ ಸಾರ್ವಜನಿಕ ವಲಯದ ತೈಲ ಕಂಪನಿಗಳು (ಐಒಸಿಎಲ್, ಹೆಚ್‍ಪಿಸಿಎಲ್, ಬಿಪಿಸಿಎಲ್) ಉತ್ಪಾದನೆಯಾಗುವ ಅನಿಲವನ್ನು ಮೊದಲು ಗೃಹಬಳಕೆಯ ಎಲ್‍ಪಿಜಿ ಗ್ರಾಹಕರಿಗೆ ಪೂರೈಸಲು ಬದ್ಧವಾಗಿವೆ. ಹೋಟೆಲ್‍ಗಳು, ರೆಸ್ಟೋರೆಂಟ್‍ಗಳು, ಆಸ್ಪತ್ರೆಗಳು ಮತ್ತು ವಿದ್ಯಾರ್ಥಿ ನಿಲಯಗಳಂತಹ ವಾಣಿಜ್ಯ ಉದ್ದೇಶಗಳಿಗೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಕೊರತೆಯಾಗದಂತೆ ಮತ್ತು ಅತಿ ಹೆಚ್ಚಿನ ದರ ವಸೂಲಿ ಮಾಡದಂತೆ ತೈಲ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಕಾಳಸಂತೆಕೋರರ ವಿರುದ್ಧ ಕ್ರಮ:
ಅಭಾವದ  ಈ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಇಂಧನ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಸರ್ಕಾರವು ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ಗೃಹಬಳಕೆಯ ಸಿಲಿಂಡರ್‌ಗಳಣ್ನು ಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸುವವರ ಮೇಲೆ ನಿರಂತರ ದಾಳಿ. ಅಕ್ರಮ ರೀಫಿಲ್ಲಿಂಗ್ ಮತ್ತು ಕಡಿಮೆ ತೂಕದ ಅನಿಲ ವಿತರಿಸುವ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲಿಸಿ ತಪ್ಪಿತಸ್ಥರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಎಲ್‍ಪಿಜಿ ನಿಯಂತ್ರಣ ಆದೇಶ 2000 ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

More articles

Latest article

Most read