ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡು ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಗೆ ಇನ್ನು ಹಲವು ದಿನ ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ.
ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದು, ಕೋರ್ಟ್‌ಗೆ ದರ್ಶನ್ ಅವರನ್ನು ಹಾಜರುಪಡಿಸಿದ್ದರು. ಈಗ ಕೋರ್ಟ್, ಜುಲೈ 18ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.