Thursday, May 23, 2024

ಶಂಕರಾಚಾರ್ಯರನ್ನು ಹಿಂದೂ ವಿರೋಧಿ ಎಂದು ಟ್ರಾಲ್ ಮಾಡುವರೇ? ಚಿತ್ರನಟ ಕಿಶೋರ್ ಬಹಿರಂಗ ಸವಾಲು

Most read

ರಾಮಮಂದಿರ ಉದ್ಘಾಟನೆ ಹಿಂದಿನ ರಾಜಕಾರಣವನ್ನು ಕಟುವಾಗಿ ಟೀಕಿಸಿರುವ ಬಹುಭಾಷಾ ಚಿತ್ರನಟ ಕಿಶೋರ್,
ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು ?? ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ ಪ್ರಶ್ನಿಸಿದ್ದಾರೆ.

ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಹಿಂದೂ ವಿರೋಧಿಗಳಲ್ಲವೇ? ಈ ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು ಅಷ್ಟೆ, ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ ಎಂದು ಅವರು ಹೇಳಿದ್ದಾರೆ.

ಗಾಂಧಿಯವರ ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ.. ಹೀಗೆ ಪ್ರತಿಯೊಂದರಲ್ಲೂ ರಾಮ ಇದ್ದ.ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ ? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ? ಎಂದು ಕಿಶೋರ್ ಬಲಪಂಥೀಯ ಶಕ್ತಿಗಳನ್ನು ಕಟುವಾಗಿ ಟೀಕಿಸಿದ್ದಾರೆ.

More articles

Latest article