ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಟ ಪ್ರಭುದೇವ

Most read

ಮಂಗಳೂರು: ಕನ್ನಡ, ತಲುಗು, ತಮಿಳು ಬಹುಭಾಷಾ ನಟ, ನೃತ್ಯ ನಿರ್ದೇಶಕ  ಪ್ರಭುದೇವ ಕುಟುಂಬ ಸಮೇತ ಇಂದು ರಾಜ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.

ಪ್ರಭುದೇವ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಗಳನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು .ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

More articles

Latest article