ನಟ ರಕ್ಷಿತ್ ಶೆಟ್ಟಿಗೆ ತಪ್ಪಿದ ಜೈಲು ಶಿಕ್ಷೆ : 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ : ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರ ನಿರ್ಮಾಣ ಸಂಸ್ಥೆ “ಪರಂವಾ ಸ್ಟುಡಿಯೋಸ್”ಗೆ ದೆಹಲಿ ಹೈಕೋರ್ಟ್ ದಂಡ ವಿಧಿಸಿದೆ.

‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಎರಡು ಹಾಡುಗಳನ್ನು ಅನುಮತಿಯಿಲ್ಲದೇ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ ಎಂದು ವರದಿ ಬಂದಿದೆ.

ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಎಮ್.ಆರ್. ಟಿ ಸಂಸ್ಥೆ ವಾದಿಸಿತ್ತು. ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಈ ಹಾಡುಗಳನ್ನು ಅನುಮತಿ ಪಡೆಯದೇ ಬಳಸಿಕೊಳ್ಳಲಾಗಿದೆ ಎಂದು ಎಮ್‌ಆರ್‌ಟಿ ಮ್ಯೂಸಿಕ್ ಆರೋಪಿಸಿತ್ತು.

‘ನ್ಯಾಯ ಎಲ್ಲಿದೆ’ ಹಾಡನ್ನು ಕೇವಲ 7 ಸೆಕೆಂಡ್ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು 31 ಸೆಕೆಂಡ್ ಮಾತ್ರ ಬಳಸಲಾಗಿದೆ. ಇದು ಅತೀ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗುವುದಿಲ್ಲ ಎಂದು ರಕ್ಷಿತ್ ಶೆಟ್ಟಿ ಪರ ವಕೀಲರು ವಾದಿಸಿದ್ದರು

ಈ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ‘ಹಾಡುಗಳ ಬಳಕೆಯು ಕೇವಲ ಕಾಕತಾಳೀಯವಲ್ಲ. ಬದಲಾಗಿ ಸಿನಿಮಾದ ಕಥೆಯ ನಿರೂಪಣೆಗೆ ಪೂರಕವಾಗಿ ಮತ್ತು ವಾಣಿಜ್ಯ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಬಳಸಲಾಗಿದೆ’. ನಾಯಕ ಸಂಕಷ್ಟದಲ್ಲಿರುವಾಗ ‘ನ್ಯಾಯ ಎಲ್ಲಿದೆ’ ಹಾಡನ್ನು ಹಿನ್ನೆಲೆಯಲ್ಲಿ ಹಾಕಿರುವುದು ಒಂದು ಸೃಜನಾತ್ಮಕ ನಿರ್ಧಾರವಾಗಿದ್ದು, ಇದು ಹಕ್ಕುಸ್ವಾಮ್ಯದ ಅಡಿ ಬರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಜೈಲುಶಿಕ್ಷೆಯಿಂದ ತಪ್ಪಿಸಿಕೊಂಡ ರಕ್ಷಿತ್ ಶೆಟ್ಟಿ : ಈ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸುವುದರಿಂದ ನ್ಯಾಯಾಲಯ ವಿನಾಯಿತಿ ನೀಡಿದ್ದರೂ, “ಹಕ್ಕುಸ್ವಾಮ್ಯ ಉಲ್ಲಂಘನೆ”ಗಾಗಿ ಈಗಾಗಲೇ ಠೇವಣಿ ಇರಿಸಲಾಗಿರುವ 20 ಲಕ್ಷ ರೂಪಾಯಿಗಳನ್ನು ಎಮ್‌ಆರ್‌ಟಿ ಮ್ಯೂಸಿಕ್‌ಗೆ ನೀಡಲು ಸೂಚಿಸಿದೆ. ಮತ್ತು,ನ್ಯಾಯಾಲಯದ ಆದೇಶವನ್ನು ಸಮಯಕ್ಕೆ ಸರಿಯಾಗಿ ಪಾಲಿಸದ ಕಾರಣಕ್ಕೆ ಹೆಚ್ಚುವರಿಯಾಗಿ 5 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

More articles

Latest article

Most read