ನಿರ್ದೇಶಕರ ಮೇಲೆ ಗುಂಡು ಹಾರಿಸಲು ಯತ್ನಿಸಿದ ಕಿರುತೆರೆ ನಟ ಬಂಧನ

ಬೆಂಗಳೂರು: ಸಿನಿಮಾ ಚಿತ್ರೀಕರಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಕಾರಣಕ್ಕೆ ಕೋಪಗೊಂಡು ನಿರ್ದೇಶಕರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಕಿರುತೆರೆ ನಟ ತಾಂಡವೇಶ್ವರ ಎಂಬುವರನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಂಡವೇಶ್ವರ್ ಜೋಡಿ ಹಕ್ಕಿ, ಭೂಮಿಗೆ ಬಂದ ಭಗವಂತ ಧಾರವಾಹಿಯಲ್ಲಿ ನಟಿಸಿದ್ದಾರೆ. ಮೂಲತಃ ಹಾಸನದ ತಾಂಡವೇಶ್ವರ ಹಾಗೂ ಚಲನಚಿತ್ರ ನಿರ್ದೇಶಕ ಭರತ್ ನವುಂದ ಪರಸ್ಪರ ಸ್ನೇಹಿತರಾಗಿದ್ದು, ದೇವನಾಂಪ್ರಿಯ ಎಂಬ ಚಲನಚಿತ್ರ ನಿರ್ದೇಶಿಸುವ ಸಂಬಂಧ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ನಿರ್ಮಾಪಕರು ಸಿಗದೇ ಇದುದ್ದರಿಂದ ತಾಂಡವೇಶ್ವರ ಅವರೇ ಹಂತ-ಹಂತವಾಗಿ ನಿರ್ದೇಶಕ ಭರತ್‌ ಅವರಿಗೆ ಒಟ್ಟು 6 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ ಚಿತ್ರ ನಿರ್ದೇಶನ ಪ್ರಾರಂಭವಾಗಿ ಎರಡು ವರ್ಷ ಕಳೆದರೂ ಭರತ್ ಚಿತ್ರ ನಿರ್ದೇಶನವನ್ನು ಪೂರ್ಣಗೊಳಿಸಿರಲಿಲ್ಲ. ಆದ್ದರಿಂದ ತಾವು ನೀಡಿರುವ ಹಣವನ್ನು ಹಿಂದಿರುಗಿಸುವಂತೆ ತಾಂಡವೇಶ್ವರ್ ಕೇಳಿದ್ದಾರೆ. ಈ ಬಗ್ಗೆ ಬಸವೇಶ್ವರ ಬಡಾವಣೆಯಲ್ಲಿರುವ ನಿರ್ಮಾಪಕರ ಕಚೇರಿಯಲ್ಲಿ ನಿನ್ನೆ ಸಂಜೆ ಸಭೆ ಸೇರಿದ್ದರು. ಹಣಕಾಸಿನ ವಿಚಾರ ಮಾತನಾಡುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದಿದೆ. ಆ ಸಂದರ್ಭದಲ್ಲಿ ತಾಂಡವೇಶ್ವರ್ ತಾವು ತಂದಿದ್ದ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಭರತ್ ಮೇಲೆ ಗುಂಡು ಹಾರಿಸಿದ್ದಾರೆ.

More articles

Latest article

Most read