ಅಭಿಮಾನ್‌ ಸ್ಟುಡಿಯೋದಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ನೆಲಸಮ; ಕೆರಳಿದ ಅಭಿಮಾನಿಗಳು

Most read

ಬೆಂಗಳೂರು: ಬೆಂಗಳೂರಿನ ವಿಷ್ಣುವರ್ಧನ್‌ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋ ಆವರಣದಲ್ಲಿರುವ ಖ್ಯಾತ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದು, ಅಭಿಮಾನಿಗಳು ಆಕ್ರೋಶಕ್ಕೆ ಕಾರಣವಾಗಿದೆ.

 ಹನ್ನೊಂದು ವರ್ಷಗಳ ಹಿಂದೆ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ನಿರ್ಮಿಸಲಾಗಿತ್ತು. ಆದರೆ  ಭೂಮಿ ದಿವಂಗತ ಹಾಸ್ಯನಟ ಬಾಲಕೃಷ್ಣ ಅವರ ಕುಟುಂಬಕ್ಕೆ ಸೇರಿದೆ. ಇಲ್ಲಿ ಸ್ಮಾರಕ ನಿರ್ಮಿಸದಂತೆ ಬಾಲಕೃಷ್ಣ ಕುಟುಂಬದವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯದಲ್ಲಿ ತೀರ್ಪು ಬಾಲಕೃಷ್ಣ ಅವರ ಕುಟುಂಬದವರ ಪರವಾಗಿ ಬಂದಿತ್ತು. ಆದರೂ ವಿಷ್ಣು ದಾದಾ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ನಿರ್ಮಾಣಕ್ಕೆ ಹೋರಾಟ ನಡೆಸುತ್ತಲೇ ಬಂದಿದ್ದರು. ಇದೀಗ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ಸಮಾಧಿಯನ್ನು ತೆರವುಗೊಳಿಸಲಾಗಿದೆ.

ಹಲವು ಎಕರೆ ಜಮೀನು ಹೊಂದಿರುವ ಇಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕಕ್ಕೆ ಹತ್ತು ಗುಂಟೆ ಜಾಗ ಕೊಡಲಾಗಿಲ್ಲ  ಎಂದು ಅಭಿಮಾನಿಗಳು ಕಿಡಿ ಕಾರಿದ್ದರು. ವಿಷ್ಣು ಅವರ ಪತ್ನಿ ಭಾರತಿ ಮತ್ತು ಅವರ ಕುಟುಂಬದ ಸದಸ್ಯರು ಸ್ಮಾರಕಕ್ಕೆ ಮೈಸೂರಿನಲ್ಲಿ ಜಾಗ ಸಿಕ್ಕಿದೆ. ಅಲ್ಲಿ ಸ್ಮಾರಕವೂ ಆಗಿದೆ. ಆದ್ದರಿಂದ ಅಭಿಮಾನ್ ಸ್ಟುಡಿಯೋದಲ್ಲಿ ಜಾಗವನ್ನು ಕೇಳುವುದಿಲ್ಲ ಎಂದು ಹೇಳಿದ್ದರು.

More articles

Latest article