ಕಲಬುರಗಿ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೆ ಇದೆ. ಇತ್ತೀಚಿಗೆ ಅಂಬೇಡ್ಕರ್ ಅವರ ಮೂರ್ತಿ ವಿರೂಪಗೊಳಿಸಿ, ಚಪ್ಪಲಿ ಹಾರ ಹಾಕಿದ್ದು ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈಗ ಕಲಬುರಗಿ ಜಿಲ್ಲೆಯ ಹಾಸ್ಟೆಲ್ವೊಂದರಲ್ಲಿ ನಡೆದ ‘ಅಂಬೇಡ್ಕರ್ ಪೂಜೆ’ಗೆ ಹಾಜರಾಗಲು ನಿರಾಕರಿಸಿದಕ್ಕೆ ಆತನ ಮೇಲೆ ಹಲ್ಲೆ ಮಾಡಿ, ಅರೆಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಗುರುವಾರ ನಡೆದಿದೆ.
ಬಲ್ಲ ಮೂಲಗಳ ಪ್ರಕಾರ, ಪ್ರತಿ ಭಾನುವಾರ ನಡೆಯುವ ‘ಅಂಬೇಡ್ಕರ್ ಪೂಜೆ’ಗೆ ಹಾಜರಾಗಲು ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುತ್ತಿದ್ದರು. ನಿರಾಕರಿಸಿದ ನಂತರ, ಹಾಸ್ಟೆಲ್‌ನ ವಿದ್ಯಾರ್ಥಿಗಳು ಆತನನ್ನು ನಿಂದಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಅರೆಬೆತ್ತಲೆಯಾಗಿ ಕಲಬುರ್ಗಿಯ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಮೆರವಣಿಗೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮಂಗಳವಾರ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಿದ ಸುದ್ದಿಯನ್ನು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಲಬುರಗಿ ನಗರದ ಹೊರವಲಯದ ಕೊಟ್ನೂರು (ಡಿ) ಗ್ರಾಮದ ಲುಂಬಿನಿ ಗಾರ್ಡನ್‌ನಲ್ಲಿ ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಪಾದರಕ್ಷೆಗಳ ಮಾಲೆ ಹಾಕಿ ಅಪವಿತ್ರಗೊಳಿಸಿದ್ದಾರೆ. ಇದನ್ನು ಖಂಡಿಸಿ ಅನೇಕ ದಲಿತ ಪರ ಸಂಘಟನೆಗಳು ಪ್ರತಿಭಟಿಸಿದ್ದವು.