ಅಹಮದಾಬಾದ್‌ ವಿಮಾನ ಪತನ: ಡಿಎನ್‌ ಎ ಮೂಲಕ 87 ಮೃತರ ಗುರುತು ಪತ್ತೆ, 47 ಮೃತದೇಹ ಹಸ್ತಾಂತರ

Most read

ಅಹಮದಾಬಾದ್: ಅಹಮದಾಬಾದ್‌ ನ ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಜನರು ಸಾವನ್ನಪ್ಪಿದ ನಾಲ್ಕು ದಿನಗಳ ನಂತರ, ಡಿ ಎನ್‌ ಎ ಹೊಂದಾಣಿಕೆಯ ಆಧಾರದಲ್ಲಿ ಇದುವರೆಗೆ 87 ಮಂದಿಯನ್ನು ಗುರುತಿಸಲಾಗಿದ್ದು, 47 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

ಇದುವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ಬಹುತೇಕ ರಾಜಸ್ಥಾನ ಮತ್ತು ಗುಜರಾತ್‌ ನ ವಿವಿಧ ಪ್ರದೇಶಗಳ ನಿವಾಸಿಗಳಾಗಿದ್ದಾರೆ.. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ ಅಥವಾ ಛಿದ್ರವಾಗಿವೆ. ಆದ್ದರಿಂದ ಅಧಿಕಾರಿಗಳು ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡುತ್ತಿದ್ದಾರೆ. ಈ ಪ್ರಕ್ರಿಯೆಗಾಗಿ 230 ತಂಡಗಳನ್ನು ರಚಿಸಲಾಗಿದೆ.

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದ 242 ಮಂದಿಯ ಪೈಕಿ 241 ಮಂದಿ ಮೃತಪಟ್ಟಿದ್ದಾರೆ. ಈ ಏರ್ ಇಂಡಿಯಾ  ವಿಮಾನ ವೈದ್ಯಕೀಯ ಕಅಲೇಜಿನ ಹಾಸ್ಟೆಲ್‌ ಕಟ್ಟಡಕ್ಕೆ ಡಿಕ್ಕಿ ಹೊಡೆದಿತ್ತು. ಹಾಗಾಗಿ ಡಿಕ್ಕಿ ಹೊಡೆದ ಸ್ಥಳದಲ್ಲಿದ್ದ ಎಂಬಿಬಿಎಸ್‌ ವಿದ್ಯಾರ್ಥಿಗಳೂ ಸೇರಿ 29 ಮಂದಿ ಅಸುನೀಗಿದ್ದಾರೆ.

More articles

Latest article