ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ವಯನಾಡಿನಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಏನೆಲ್ಲಾ ವಿಷಯಗಳನ್ನು ಕುರಿತು ಚರ್ಚೆ ನಡೆಸಿದರು ಎನ್ನುವುದು ತಿಳಿದುಬಂದಿಲ್ಲವಾದರೂ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆದಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ್ ಜಾರಕಿಹೊಳಿ, ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಹಾಜರಿದ್ದರು.

