ನಾಮಪತ್ರ ಹಿಂಪಡೆದ ಅಜ್ಜಂಪೀರ್ ಖಾದ್ರಿ

Most read

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ ಅವರ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದರು.

ಸಚಿವರು, ಶಾಸಕರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸು ಪಡೆದರು.

ನಾಮಪತ್ರ ವಾಪಸ್ ಪಡೆದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಖಾದ್ರಿ, ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ನಾನು ಸಿದ್ದರಾಮಯ್ಯ ಅವರ ಶಿಷ್ಯ . ಅವರ ಮಾರ್ಗದರ್ಶನದಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದರು.

More articles

Latest article