ಮಹಿಳಾ SIಗೆ ಕಪಾಳಮೋಕ್ಷ ಆರೋಪ: ಮಗಳ ತಪ್ಪಿದ್ದರೆ ಕ್ಷಮೆ ಕೇಳುತ್ತೇನೆ ಎಂದ ಶಾಸಕ ಸುರೇಶ್ ಗೌಡ

ಮಂಡ್ಯ: ಮಹಿಳಾ ಪೊಲೀಸ್ ಉಪನಿರೀಕ್ಷಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪುತ್ರಿ ಐಶ್ವರ್ಯ ಅವರಿಂದ ತಪ್ಪಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವುದಾಗಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಘಟನೆ ಕುರಿತು ಮಾತನಾಡಿರುವ ಅವರು, “ನನ್ನ ಮಗಳ ತಪ್ಪಿದ್ದರೆ ನಾನು ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ. ಆದರೆ ನನ್ನ ಮಗಳ ದೂರು ಏನಿತ್ತು ಎಂಬುದನ್ನೂ ಕೇಳಬೇಕಿತ್ತು” ಎಂದು ಹೇಳಿದ್ದಾರೆ.

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉಕ್ಕಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಈ ವೇಳೆ ತಮ್ಮ ಪುತ್ರಿಯನ್ನು ಸಬ್ ಇನ್ಸ್‌ಪೆಕ್ಟರ್ ಒಳಗೆ ಬಿಡದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆರಂಭವಾಗಿತ್ತು ಎಂದು ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.

“ಸಬ್ ಇನ್ಸ್‌ಪೆಕ್ಟರ್ ಒಳಗೆ ಬಿಡಲಿಲ್ಲ ಅಂತ ಗಲಾಟೆ ಆಗಿದೆ. ಮಾತಿಗೆ ಮಾತು ಬೆಳೆದಿರಬಹುದು” ಎಂದು ಅವರು ಹೇಳಿದ್ದಾರೆ.

ತಮ್ಮ ಪುತ್ರಿ ಐಶ್ವರ್ಯ ಅವರ ವರ್ತನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕರು, ಘಟನೆಗೆ ಸಂಬಂಧಿಸಿದ ಎರಡೂ ಬದಿಯ ವಿಚಾರಗಳನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ. ತಮ್ಮ ಮಗಳ ತಪ್ಪು ಸಾಬೀತಾದರೆ ಕ್ಷಮೆ ಕೇಳಲು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಮಹಿಳಾ SI ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನೆಯ ನಿಖರ ಹಿನ್ನೆಲೆ ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ.

More articles

Latest article

Most read