ಚುನಾವಣಾ ಆಯೋಗದ ‘ಏಕಪಕ್ಷೀಯ ನಿರ್ಧಾರ’ ಆರೋಪ: ಕೇಂದ್ರ, ECIಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಇತರ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆ ಪಡೆಯದೆ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿತು.

ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಆರೋಪಗಳಿಗೆ ಸಂಬಂಧಿಸಿದಂತೆ ಒಂದು ವಾರದೊಳಗೆ ವಿವರವಾದ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಆದರೆ, ಈ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಮಾಡಲಾಗಿದ್ದ ಮನವಿಗೆ ಸುಪ್ರೀಂ ಕೋರ್ಟ್ ಸದ್ಯಕ್ಕೆ ಒಪ್ಪಿಗೆ ನೀಡಿಲ್ಲ.

ECI ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಅರ್ಜಿದಾರ ರಾಕೇಶ್ ಕುಮಾರ್ ಸಿಂಗ್ ಪರ ಹಿರಿಯ ವಕೀಲ ವಿಕಾಸ್ ಸಿಂಗ್ ಮಂಡಿಸಿದ ವಾದಗಳನ್ನು ಆಲಿಸಿತು.

ಚುನಾವಣಾ ಆಯೋಗವು ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪೀಠ ಅಭಿಪ್ರಾಯಪಟ್ಟಿತು. ಆಯೋಗದ ನಿರ್ಧಾರಗಳು ಸರ್ವಾನುಮತದಿಂದ ಅಥವಾ ಬಹುಮತದ ಆಧಾರದ ಮೇಲೆ ಕೈಗೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿತು.

ಸಾಮಾನ್ಯವಾಗಿ ಆಯೋಗದಲ್ಲಿ ಇದೇ ರೀತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಾವು ಭಾವಿಸುವುದಾಗಿ ಹೇಳಿದ ನ್ಯಾಯಾಲಯ, ಒಬ್ಬರೇ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂಬ ಆರೋಪದ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ತಿಳಿದುಕೊಳ್ಳಲು ಬಯಸಿದೆ ಎಂದು ಸೂಚಿಸಿತು.

‘CEC ಅಮಾನತು ಮಾಡಿದರೆ ಚುನಾವಣೆ ನಡೆಸುವವರು ಯಾರು?’

ವಿಚಾರಣೆ ವೇಳೆ ಮುಖ್ಯ ಚುನಾವಣಾ ಆಯುಕ್ತರನ್ನು ಏಕಪಕ್ಷೀಯವಾಗಿ (ex parte) ಅಮಾನತುಗೊಳಿಸುವುದರಿಂದ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿತು.

ಇದರಿಂದ ಚುನಾವಣೆಗಳ ಮೇಲೂ ಪರಿಣಾಮ ಬೀರಬಹುದು ಎಂದು ಹೇಳಿದ ಪೀಠ, “ಚುನಾವಣೆಗಳನ್ನು ಯಾರು ನಡೆಸುತ್ತಾರೆ?” ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ವಿಕಾಸ್ ಸಿಂಗ್, ಉಳಿದ ಇಬ್ಬರು ಚುನಾವಣಾ ಆಯುಕ್ತರು ಆಯೋಗದ ಕಾರ್ಯಗಳನ್ನು ನಿರ್ವಹಿಸಬಹುದು ಎಂದು ವಾದಿಸಿದರು.

2023ರ ಅನುಪ್ ಬರನ್ವಾಲ್ ತೀರ್ಪಿನ ಉಲ್ಲೇಖ

ವಾದದ ವೇಳೆ ವಿಕಾಸ್ ಸಿಂಗ್ ಅವರು ಸುಪ್ರೀಂ ಕೋರ್ಟ್‌ನ 2023ರ ಅನುಪ್ ಬರನ್ವಾಲ್ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದರು.

ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡ ಸಮಿತಿಯ ಪಾತ್ರ ಇರಬೇಕು ಎಂಬ ತೀರ್ಪಿನ ಅಂಶವನ್ನು ಅವರು ಪ್ರಸ್ತಾಪಿಸಿದರು. ಬಳಿಕ ಸಂಸತ್ತು ಈ ಸಂಬಂಧ ಕಾನೂನನ್ನು ಜಾರಿಗೆ ತಂದಿರುವುದನ್ನೂ ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ಅದರ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡಲು ಸಾಮೂಹಿಕ ನಿರ್ಧಾರ ಕೈಗೊಳ್ಳುವ ವ್ಯವಸ್ಥೆ ಅಗತ್ಯ ಎಂದು ವಕೀಲರು ವಾದಿಸಿದರು.

ಈ ಆರೋಪಗಳ ಕುರಿತು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ಪ್ರತಿಕ್ರಿಯೆ ಬಂದ ಬಳಿಕ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

More articles

Latest article

Most read