ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟಾ, ಹಿಜಾಬ್ ಸೇರಿದಂತೆ ಎಲ್ಲಾ ಧಾರ್ಮಿಕ ಸಂಕೇತ ಧರಿಸಲು ಅವಕಾಶ

ಬೆಂಗಳೂರು : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರಗಳ ಜೊತೆಗೆ ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟಾ, ಹಿಜಾಬ್ ಸೇರಿದಂತೆ ಎಲ್ಲಾ ಧಾರ್ಮಿಕ ಸಂಕೇತಗಳನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ವಿವಾದ ತೀವ್ರವಾಗಿತ್ತು. ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಬರುತ್ತಿದ್ದ ಪ್ರಕರಣ ಅಲ್ಲಲ್ಲಿ ನಡೆದಿತ್ತು. ಇದರಿಂದ  ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ನಿರ್ಬಂಧ ವಿಧಿಸಿ 2022 ಫೆ.5 ರಂದು ಅಂದಿನ ಸರ್ಕಾರ ಆದೇಶ ಹೊರಡಿಸಿತ್ತು. ಈಗ ಆ ಆದೇಶ ವಾಪಸ್ ಪಡೆದು, ಎಲ್ಲರೂ ಅವರವರ ಧರ್ಮ ಸಂಕೇತಗಳನ್ನು ಧರಿಸಲು ಅವಕಾಶ ವಿಧಿಸಲಾಗಿದೆ.

ವಿದ್ಯಾರ್ಥಿಗಳು ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟ, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲಾ ಧರ್ಮದವರಿಗೂ ಅವಕಾಶ: ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ನೀಡಲಾಗಿದೆ. ಜತೆಗೆ ಹಿಂದೂ ಧರ್ಮದ ಪವಿತ್ರ ದಾರ, ಪೇಟ, ರುದ್ರಾಕ್ಷಿ, ಜನಿವಾರ ಸೇರಿ ಎಲ್ಲಾ ಧರ್ಮಗಳ ಧಾರ್ಮಿಕ ವಸ್ತುಗಳಿಗೂ ಅವಕಾಶವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರವು ಜಾರಿಗೊಳಿಸಿದ್ದ ಶಾಲಾ ಕಾಲೇಜುಗಳಲ್ಲಿ ಹಿಬಾಜ್ ನಿಷೇಧ ಆದೇಶವನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ತೆರವು ಮಾಡಲಾಗವುದು. ಮುಸ್ಲಿಂ ಸಮುದಾಯದ ಬೇಡಿಕೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಹಿಜಾಬ್ ವಿವಾದದ ಹಿನ್ನೆಲೆ : 2022ರ ಆರಂಭದಲ್ಲಿ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬರುವುದನ್ನು ನಿರ್ಬಂಧಿಸಲಾಯಿತು. ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದವು. ಹಲವು ಹಿಂಸಾಚಾರದ ಘಟನೆಗಳೂ ನಡೆದಿದ್ದವು. 2022 ಫೆ.5 ರಂದು ಅಂದಿನ ಬಿಜೆಪಿ ಸರ್ಕಾರವು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ, ಹಿಜಾಬ್ ಅಥವಾ ಇತರ ಧಾರ್ಮಿಕ ಉಡುಪುಗಳನ್ನು ಧರಿಸದಂತೆ ಆದೇಶ ಹೊರಡಿಸಿತು.

ಈ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿ ಸರ್ಕಾರಿ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠವು ಅಕ್ಟೋಬರ್ 2022 ರಲ್ಲಿ ಭಿನ್ನ ತೀರ್ಪು ನೀಡಿತು. ನಂತರ ಈ ಪ್ರಕರಣವು ವಿಸ್ತೃತ ಪೀಠಕ್ಕೆ ವರ್ಗಾವಣೆ ಆಗಿದ್ದು, ಅರ್ಜಿಯ ವಿಚಾರಣೆ ಬಾಕಿ ಇದೆ.

More articles

Latest article

Most read