ನನ್ನ ಹೇಳಿಕೆಗೆ ಈಗಲೂ ಬದ್ಧ; ನನ್ನ ಹೇಳಿಕೆಯನ್ನು ತಿರುಚಲಾಗಿದೆ:ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Most read

ಮೈಸೂರು: ಕಾಂಗ್ರೆಸ್‌ನಲ್ಲಿ ಮುಂದಿನ ನಾಯಕತ್ವ ಕುರಿತು ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

 ಅವರು ಇಂದು ಬೆಳಗಾವಿಯಲ್ಲಿ ನೀಡಿದ ಹೇಳಿಕೆಗೆ ಸ್ಪಷ್ಟೀಕರಣ ನೀಡಿ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ನನ್ನ ಹೇಳಿಕೆಯನ್ನೇ ವಿನಾಕಾರಣ ಕೆದಕಿ ಕೆದಕಿ ವಿವಾದ ಹುಟ್ಟು ಹಾಕಲಾಗುತ್ತಿದೆ. ಆ ವಿಷಯ ಕುರಿತು ಮಾಧ್ಯಮದ ಮುಂದೆ ಹೇಳುವುದೇನೂ ಇಲ್ಲ ಎಂದರು.

ಒಂದು ವೇಳೆ ಪಕ್ಷ ನೋಟಿಸ್ ಕೊಟ್ಟರೆ ಉತ್ತರಿಸುತ್ತೇನೆ. ಸಧ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಾರೆ. ಪಕ್ಷ ಅಥವಾ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವಿಚಾರ ಕುರಿತು ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯೊಳಗೆ ಮಾತ್ರ ಚರ್ಚೆ ಮಾಡುತ್ತೇನೆ ಎಂದರು.

More articles

Latest article